Mon. Dec 23rd, 2024

ಕೇಂದ್ರ ಸರ್ಕಾರವೇ ಪ್ರಜ್ವಲ್ ನ ರಕ್ಷಣೆ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

Share this with Friends

ಮುಂಡಗೋಡು, ಮೇ.3: ಕೇಂದ್ರ ಸರ್ಕಾರವೇ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆ ಕಾಂಗ್ರೆಸ್ ‌ಅಭ್ಯರ್ಥಿ ಪರ ಮತಪ್ರಚಾರ‌ ಸಭೆಯ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದರು.

ಪ್ರಜ್ವಲ್ ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ, ಅವರು ದೇಶಕ್ಕೆ ಬರಲೇಬೇಕು,ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದು ‌ತಿಳಿಸಿದರು.

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ, ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಸಿದ್ದು ಟೀಕಿಸಿದರು

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ‌ ಎಂದು ಸಿಎಂ ಹೇಳಿದರು.

ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗು ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ತಪ್ಪಿತಸ್ಥನನ್ನು ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.


Share this with Friends

Related Post