ಬೆಂಗಳೂರು, ಫೆ.9: ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಸಜ್ಜಾಗಿದ್ದು ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ.
ಇದರ ಭಾಗವಾಗಿ ಇಂದು ಬೆಂಗಳೂರಿನ ನೆಲಮಂಗಲ ತಾಲೂಕು ದಾಬಸ್ ಪೇಟೆ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಅಭಿಯಾನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.
ಡಿಜಿಪಿ ಅಲೋಕ್ ಮೋಹನ್, ಐಜಿಪಿ ರವಿಕಾಂತೇಗೌಡ, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್, ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಅಭಿಯಾನದ ವೇಳೆ ವಿವಿಧಡೆ ವಶಪಡಿಸಿಕೊಂಡಿದ್ದ ಮಾದಕ ದ್ರವ್ಯಗಳನ್ನು ನಾಶಪಡಿಸಲಾಯಿತು.
ಈ ವೇಳೆ ಡಾ. ಜಿ ಪರಮೇಶ್ವರ್ ಮಾತನಾಡಿ,ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರ ಗೊಳಿಸಿದ್ದೇವೆ,ರಾಜ್ಯವನ್ನು ನಶೆಮುಕ್ತಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಮಾದಕ ವಸ್ತು ಮಾರಾಟ ಅಥವಾ ಶೇಖರಣೆ ಮುಂತಾದ ದಂಧೆಯಲ್ಲಿ ತೊಡಗಿರುವವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಪರಮೇಶ್ವರ್ ಕಠಿಣ ಎಚ್ಚರಿಕೆ ನೀಡಿದರು.