Sat. Apr 19th, 2025

ಇಡಿ‌ ದಾಳಿ: ಕೋಟಿ,ಕೋಟಿ ಹಣ ವಶ

Share this with Friends

ರಾಂಚಿ,ಮೇ.6: ಲೋಕಸಭಾ ಚುನಾವಣೆಯ ಸಮಯದಲ್ಲೇ ಜಾರಿ ನಿರ್ದೇಶನಾಲಯ ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕೋಟಿ,ಕೋಟಿ ಹಣವನ್ನು ಪತ್ತೆ ಮಾಡಿದೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ನಾಯಕ ಆಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆ ಕೆಲಸಗಾರನ ಮನೆಯಲ್ಲಿದ್ದ 20 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.

ಬ್ಯಾಗ್‌ ಗಳಲ್ಲದೆ, ಕಮೋಡ್‌ಗಳಲ್ಲೂ ಹಣವನ್ನು ಶೇಖರಿಸಿಡಲಾಗಿತ್ತು.ಸದ್ಯ ಇಡಿ ತನಿಖೆ ನಡೆಸುತ್ತಿರುವ ವೀರೇಂದ್ರ ಕೆ ರಾಮ್ ಪ್ರಕರಣದ ಹಣ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಮುಖ್ಯ ಎಂಜಿನಿಯರ್‌ ಆಗಿದ್ದ ವೀರೇಂದ್ರ ಕೆ ರಾಮ್‌ ಅವರು 100 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿದ ಆರೋಪ ಎದುರಿಸುತ್ತಿದ್ದಾರೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ಆಗಿದ್ದ ವೀರೇಂದ್ರ ಕೆ ರಾಮ್ ಅವರನ್ನು ಫೆಬ್ರವರಿ 2023 ರಲ್ಲಿ ಇಡಿ ಬಂಧಿಸಿತ್ತು.

ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರದ ವಿವರಗಳನ್ನು ಹೊಂದಿದ್ದ ಪೆನ್‌ಡ್ರೈವ್‌ ಅನ್ನು ವೀರೇಂದ್ರ ಕೆ ರಾಮ್‌ನಿಂದ ಇಡಿ ಪಡೆದುಕೊಂಡಿದೆ.


Share this with Friends

Related Post