Mon. Dec 23rd, 2024

ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ ಎಂದಿದ್ದೇನೆ, ಡಿ.ಕೆ.ಸುರೇಶ್ ಅವರನ್ನು ಅಲ್ಲ : ಈಶ್ವರಪ್ಪ

K. S. Eshwarappa
Share this with Friends

ಶಿವಮೊಗ್ಗ. ಫೆ.10: ಸಂಸದ ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ನಾನು ಹೇಳಿಲ್ಲ. ದೇಶ ವಿಭಜನೆ ಮಾಡುವ ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದೇನೆ‌ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿದ ಅವರು, ಸಂಸದ ಸುರೇಶ್ ಅವರ ದೇಶ ವಿಭಜನೆ ಹೇಳಿಕೆಯನ್ನು ಖಂಡಿಸುತ್ತೇನೆ. ತೆರಿಗೆ ಕೇಳುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ತೆರಿಗೆ ನೆಪದಲ್ಲಿ ದೇಶ ವಿಭಜನೆ ಮಾಡುವುದಕ್ಕೆ ವಿರೋಧವಿದೆ ಎಂದರು.

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯೇ ಸುಳ್ಳು ಎಂದು ಕೇಂದ್ರದ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ತೆರಿಗೆ ಹಂಚಿಕೆ ವಿಚಾರದಲ್ಲಿ ಸಿಎಂ ಶ್ವೇತ ಪತ್ರ ಹೊರಡಿಸಬೇಕು. ಪದೆ ಪದೇ ಕೇಂದ್ರದಿಂದ ತೆರಿಗೆ ಹಂಚಿಕೆ ಸರಿಯಾಗಿ ಆಗಿಲ್ಲವೆಂದು ಆರೋಪ ಮಾಡುವುದು ಸರಿಯಲ್ಲ. ಶ್ವೇತಪತ್ರ ಹೊರಡಿಸಿದ್ದೇ ಆದಲ್ಲಿ ಸಿದ್ದರಾಮಯ್ಯ ಅವರ ನಿಜಬಣ್ಣ ಬಹಿರಂಗಗೊಳ್ಳಲಿದೆ ಎಂದರು.

ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ರಾಜ್ಯ ಸರ್ಕಾರ ಸಜ್ಜು

ಗ್ಯಾರಂಟಿಗಳಿಂದ ಕರ್ನಾಟಕ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ನಾನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಂತೆ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿಲ್ಲ. ನನ್ನ ಮೇಲಿದ್ದ ಎಲ್ಲ ಪ್ರಕರಣಗಳಲ್ಲೂ ಕ್ಲೀನ್ ಚೀಟ್ ಸಿಕ್ಕಿದೆ. ಇದೀಗ ಮತ್ತೊಂದು ಎಫ್ ಐಆರ್ ದಾಖಲಿಸಿದ್ದಾರೆ. ಇದರಲ್ಲೂ ಕ್ಲೀನ್ ಚೀಟ್ ಸಿಗಲಿದೆ. ಒಂದಲ್ಲ ನೂರು ಎಫ್ ಐಆರ್ ದಾಖಲಿಸಿದರೂ ಹೆದರುವುದಿಲ್ಲ ಎಂದು ಹೇಳಿದರು.


Share this with Friends

Related Post