Sat. Apr 19th, 2025

ಪರಪ್ಪನ ಅಗ್ರಹಾರ ಜೈಲಿಗೆ ರೇವಣ್ಣ ಶಿಫ್ಟ್

Share this with Friends

ಬೆಂಗಳೂರು,ಮೇ.8: ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಸಧ್ಯಕ್ಕೆ‌ ಪರಪ್ಪನ ಅಗ್ರಹರ ಜೈಲಿಗೆ ಶಿಫ್ಟ್ ಆಗಲಿದ್ದಾರೆ.

ಕೆಆರ್‌ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ನೀಡಿದೆ.

ಎಸ್ ಐಟಿ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ರೇವಣ್ಣರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು, ನ್ಯಾಯಧೀಶರು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.ಹಾಗಾಗಿ ಎಸ್ಐಟಿ ಅಧಿಕಾರಿಗಳು ರೇವಣ್ಣರನ್ನು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.

ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ರೇವಣ್ಣ ಆಪ್ತನನ್ನು ಕೂಡಾ ವಿಚಾರಣೆಗೆ ಒಳಪಡಿಸಿದ್ದಾರೆ.

ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಇಂದು ನಡೆಸಿ‌
ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ. ಹೀಗಾಗಿ ರೇವಣ್ಣ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಗದ್ದಿದ್ದರೆ ಮೇ 14ರವರೆಗೆ ರೇವಣ್ಣ ಅವರಿಗೆ ಜೈಲಿನಲ್ಲೇ ಗತಿ


Share this with Friends

Related Post