Fri. Nov 1st, 2024

ಜೆಡಿಎಸ್,ಬಿಜೆಪಿ ನಾಯಕರಿಗೆ ಎಂ.ಲಕ್ಷ್ಮಣ್ ಟಾಂಗ್

Share this with Friends

ಮೈಸೂರು,ಮೇ.8: ಪ್ರಜ್ವಲ್ ರೇವಣ್ಣ ವಿರುದ್ದ ವಿಡಿಯೋ ಹಂಚಿಕೆ ಸಂಬಂಧ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂಬ ಆರೋಪಕ್ಕೆ ಜೆಡಿಎಸ್,ಬಿಜೆಪಿ ನಾಯಕರಿಗೆ ಎಂ.ಲಕ್ಷ್ಮಣ್ ಟಾಂಗ್ ನೀಡಿದ್ದಾರೆ

ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಈ ಪ್ರಕರಣವನ್ನ ಅಶೋಕ್ ಸೇರಿದಂತೆ ಹಲವರು ಡಿ.ಕೆ ಶಿವಕುಮಾರ್ ಮೇಲೆ ಹೊರಿಸುತ್ತಿದ್ದಾರೆ ಇದು ಬಿಜೆಪಿ ಜೆಡಿಎಸ್ ನಾಯಕರ ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ಆರ್ ಅಶೋಕ್, ವಿಜಯೇಂದ್ರ, ಪ್ರೀತಮ್ ಗೌಡ, ದೇವರಾಜೇಗೌಡ ನಾಲ್ವರನ್ನ ಮಂಪರು ಪರೀಕ್ಷೆಗೆ ಒಳಪಡಿಸಬೇಕು,ಆಗ ಸತ್ಯ ಹೊರಬರುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿದೆ, ಈ ಪ್ರಕರಣವನ್ನ ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಟೀಕಿಸಿದರು.

ಈ ಪ್ರಕರಣದಲ್ಲಿ ಸುಮ್ಮನಿದ್ದ ಬಿಜೆಪಿಯವರು ದೇವರಾಜೇಗೌಡ ಹೇಳಿಕೆ ಬಳಿಕ ಅಲರ್ಟ್ ಆಗಿದ್ದಾರೆ. ಮೊದಲು ದೇವರಾಜೇಗೌಡನನ್ನ ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ವಿಡಿಯೋ ಮಾಡಿದ್ದು ಪ್ರಜ್ವಲ್ ರೇವಣ್ಣ, ವಿಡಿಯೋ ತೆಗೆದುಕೊಂಡಿದ್ದು ಕಾರ್ತಿಕ್, ದೇವರಾಜೇಗೌಡ ಮೂಲಕ ವಿಡಿಯೋ ರಿಲೀಸ್ ಆಗಿದೆ. ಇದರ ನಡುವೆ ಡಿ.ಕೆ ಶಿವಕುಮಾರ್ ಪಾತ್ರ ಏನಿದೆ ಎಂದು ಪ್ರಶ್ನಿಸಿದರು.

ಡಿಸೆಂಬರ್ 23 ರಂದು ವಿಜಯೇಂದ್ರ ಮೂಲಕ ಬಿಜೆಪಿ ಹೈಕಮಾಂಡ್ ಗೆ ಪೆನ್ ಡ್ರೈವ್ ತಲುಪಿತ್ತು. ಅಭ್ಯರ್ಥಿ ಬದಲಾವಣೆ ಮಾಡಬೇಕೆಂದುಕೊಂಡಿರಿ ಹೀಗಿದ್ದರೂ ಕೂಡ ನೀವು ಪ್ರಜ್ವಲ್ ಕೈ ಮೇಲೆತ್ತಿ ಪ್ರಚಾರ ಮಾಡಿದಿರಿ, ಮೈಸೂರಲ್ಲಿ ಮೋದಿಯವರು ಪ್ರಜ್ವಲ್ ಪರ ಕ್ಯಾಂಪೆನ್ ಮಾಡಿದ್ದಾರೆ, ಇದೇನಾ ನಿಮ್ಮ ನೈತಿಕತೆ ಎಂದು ಕೇಳಿದರು‌

ದೇವೇಗೌಡರು ಒಕ್ಕಲಿಗ ಸಮುದಾಯದ ಪ್ರಶ್ನಾತೀತ ನಾಯಕ. ಇಂತಹ ನಾಯಕರ ಮಕ್ಕಳು, ಮೊಮ್ಮಕ್ಕಳಾಗಿ ನೀವು ಮಾಡುತ್ತಿರುವ ಕೆಲಸ ಏನು, ಇಳಿ ವಯಸ್ಸಿನಲ್ಲಿ ದೇವೇಗೌಡರಿಗೆ ನೋವುಂಟು ಮಾಡ್ತಿದ್ದೀರಲ್ಲ ಇದು ಸರಿನಾ ಎಂದು ಪ್ರಶ್ನಿಸಿದರು.

ಒಕ್ಕಲಿಗ ಸಮುದಾಯದ ರಕ್ಷಣೆ ಮಾಡ್ತೀವಿ ಅಂತೀರಾ. ಒಕ್ಕಲಿಗ ಸಮುದಾಯದ ಹೆಣ್ಣುಮಕ್ಕಳು ಆ ವಿಡಿಯೋದಲ್ಲಿ ಇದ್ದಾರಲ್ಲ ಇದಕ್ಕೇನು ಹೇಳ್ತೀರಾ. ಎಸ್ ಐಟಿ ಮೇಲೆ ನಿಮಗೆ ನಂಬಿಕೆ ಇಲ್ಲ ಅಂದ್ರೆ ಸಿಬಿಐ, ಎನ್ ಐಎ ಸೇರಿದಂತೆ ಯಾವುದೇ ಇನ್ವೆಸ್ಟಿಗೆಷನ್ ಟೀಮ್ ಗೆ ಪ್ರಕರಣ ವಹಿಸಿ. ಬಿಜೆಪಿ ಜೆಡಿಎಸ್ ನೀವು ಮೈತ್ರಿ ಮಾಡಿಕೊಂಡಿದಿರಲ್ಲ ನೀವೇ ಸಿಬಿಐಗೆ ಈ ಕೇಸ್ ವಹಿಸಿ ಎಂದು ಎಂ.ಲಕ್ಷ್ಮಣ್ ಸವಾಲು ಹಾಕಿದರು.

ಡಿ.ಕೆ ಶಿವಕುಮಾರ್ ದೇವರಾಜೇಗೌಡ ಅವರೊಂದಿಗೆ ಮಾತನಾಡಿದ್ದೇ ತಪ್ಪು ಎಂದು ಬಿಂಬಿಸಲಾಗಿದೆ,ಇಬ್ಬರ ಜಗಳದಲ್ಲಿ ಅಶೋಕ್ ಅವರು ಒಕ್ಕಲಿಗ ಲೀಡರ್ ಆಗಿ ಬೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.


Share this with Friends

Related Post