Mon. Dec 23rd, 2024

ಎಸ್ಸೆಸ್ಸೆಲ್ಸಿ‌ ಫಲಿತಾಂಶ‌: ಉಡುಪಿ ಪ್ರಥಮ ಸ್ಥಾನ ಕೊನೆಯ ಸ್ಥಾನದಲ್ಲಿ ಯಾದಗಿರಿ

Share this with Friends

ಬೆಂಗಳೂರು/ಬೆಳಗಾವಿ: ಇ‌ಂದು ರಾಜ್ಯದ ಎಸ್ಸೆಸ್ಸೆಲ್ಸಿ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ 8 ಲಕ್ಷ 69 ಸಾವಿರದ 968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2024ರ ಮಾ.25ರಿಂದ 2024ರ ಏಪ್ರಿಲ್ 6ರವರೆಗೆ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-1ರಲ್ಲಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪಾಸ್​​ ಆಗಿದ್ದು ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್​ ಆಗಿದ್ದಾರೆ. ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಪಡೆದರೆ ಯಾದಗಿರಿ ಕೊನೆಯ ಸ್ಥಾನ‌ ಪಡೆದುಕೊಂಡಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಇನ್ನು ಕಳೆದ ಬಾರಿ 26ನೇ ಸ್ಥಾನದಲ್ಲಿದ್ದ ಬೆಳಗಾವಿ ‌ಇ ಬಾರಿ 29ನೆ ಸ್ಥಾನ ಪಡೆದುಕೊಂಡಿದೆ.ಇನ್ನು‌ ಚಿಕ್ಕೋಡಿ 25 ನೇ ಸ್ಥಾನ ಪಡೆದುಕೊಂಡಿದೆ. ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಸುಬಲ ಸಾಗರ ಪ್ರೌಢ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿ ಸಿದ್ದಾಂತ 625 ಅಂಕಕ್ಕೆ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ
1)ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ),
2) ಮೇದಾ ಪಿ ಶೆಟ್ಟಿ (ಬೆಂಗಳೂರು) 625ಕ್ಕೆ 624 ಅಂಕ
3) ಹರ್ಷಿತಾ ಡಿಎಂ (ಮಧುಗಿರಿ) 625ಕ್ಕೆ 624 ಅಂಕ
4) ಚಿನ್ಮಯ್ (ದಕ್ಷಿಣ ಕನ್ನಡ)
5)ಸಿದ್ದಾಂತ್ (ಚಿಕ್ಕೊಡಿ )
6) ದರ್ಶನ್ (ಶಿರಸಿ)
7)ಚಿನ್ಮಯ್ (ಶಿರಸಿ)
8)ಶ್ರೀರಾಮ್ (ಶಿರಸಿ)

ಒಟ್ಟನಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಬಾಲಕಿಯರೇ ಮೇಲುಗೈ ಸಾಧಿಸಿ ರಾಜ್ಯಕ್ಕೆ ಕೀರ್ತಿ ತರುವಲ್ಲಿ ಯಶ್ವಸಿಯಾಗಿದ್ದಾರೆ.


Share this with Friends

Related Post