Wed. Dec 25th, 2024

ಬಾಲಕಿ ಹತ್ಯೆ ಪ್ರಕರಣ:ಆರೋಪಿ ಬಂಧನ;ರುಂಡ‌‌ ವಶ

Share this with Friends

ಕೊಡಗು,ಮೇ.11: ನಿಶ್ಚಿತಾರ್ಥ ಮುಂದೂಡಿದ್ದಕ್ಕೆ ಕೋಪದಿಂದ ಬಾಲಕಿಯ ಹತ್ಯೆ ಮಾಡಿ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ ರುಂಡ‌ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಬಾಲಕಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್​ನನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.

ನಿನ್ನೆ ಆರೋಪಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂಬ ಸುಳ್ಳು ವದಂತಿ ಹರಡಿತ್ತು.ನಂತರ ಈ ಸುದ್ದಿ ಸುಳ್ಳು, ಆರೋಪಿಯ ಪತ್ತೆ ಕಾರ್ಯ ಮುಂದುವರಿಸಿದ್ದೇವೆ ಎಂದು ಎಸ್​ಪಿ ಮಾಹಿತಿ ನೀಡಿದ್ದರು.

ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದು ವಿಚಾರಣೆ ನಡೆಸುತ್ತಿದ್ದಾರೆ,ಜತೆಗೆ ಆರೋಪಿ ಪ್ರಕಾಶನ ಬಂಧನದ ಫೋಟೋ ಕೂಡ ಬಿಡುಗಡೆ ಮಾಡಿದ್ದಾರೆ.

ಪ್ರಕಾಶನನ್ನು ಕೊಲೆ ಮಾಡಿದ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿ ಬಾಲಕಿ ಧರಿಸಿದ್ದ ಚಪ್ಪಲಿಯನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.


Share this with Friends

Related Post