ಮೈಸೂರು, ಮೇ.12:ಆತ್ಮಜ್ಞಾನ, ನಮ್ಮತನದ ಅರಿವೇ ವಿದ್ಯೆ ಎಂಬುದನ್ನು ಶ್ರೀ ಶಂಕರಾಚಾರ್ಯರು ತಿಳಿಸಿಕೊಟ್ಟಿದ್ದಾರೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್ ಹೇಳಿದರು.
ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ರಾಮ ಮಂದಿರದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಶ್ರೀ ಆದಿ ಗುರು ಶಂಕರಾಚಾರ್ಯರು, ಶ್ರೀ ರಾಮಾನುಜಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತೀಯ ಪ್ರಜ್ಞಾ ಪರಂಪರೆಯಲ್ಲಿ ಶಿಖರಪ್ರಾಯವಾಗಿ ಕಾಣಿಸಿಕೊಂಡವರು ಆಚಾರ್ಯ ಶಂಕರರು, ಭಾರತೀಯ ಚಿಂತನೆಯ ಮೂಲವೆನಿಸಿರುವ ವೇದಗಳ ಸಾರದ ಬಗ್ಗೆ ಪ್ರತಿಪಾದಿಸಿದ್ದಾರೆ, ಜ್ಞಾನವೇ ಆತ್ಮಜ್ಞಾನ, ಬ್ರಹ್ಮಜ್ಞಾನ ಎಂಬುದನ್ನು ಆಚಾರ್ಯರ ಕಾಣಿಕೆಯ ಸಾರವಾಗಿದೆ ಎಂದು ಗಣ್ಯರು ಹೇಳಿದರು.
ಜಾತಿ, ಮತ, ವರ್ಗ, ಲಿಂಗ ಭೇದವಿಲ್ಲದೆ ಎಲ್ಲರೂ ಮುಕ್ತಿ ಮಾರ್ಗದಲ್ಲಿ ಹೋಗಬಹುದೆಂಬುದನ್ನು ಸಾರಿದವರು. ಕರ್ನಾಟಕಕ್ಕೂ ಆಗಮಿಸಿ ಸುಮಾರು 32 ವರ್ಷ ಈ ನಾಡಿನಾದ್ಯಂತ ಸಂಚರಿಸಿ ಭಕ್ತಿಯನ್ನು ಎಲ್ಲ ವರ್ಗದವರಿಗೂ ಪರಿಚಯಿಸಿದ ಸಂತರು ಎಂದು ಹೇಳಿದರು
ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಗ್ರಾಮಾಂತರ ಅಧ್ಯಕ್ಷರಾದ ಗೋಪಾಲ್ ರಾವ್, ಓಂ ಶ್ರೀನಿವಾಸ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೋಳ ಜಗದೀಶ್, ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘದ ಕಾರ್ಯದರ್ಶಿ ಮಹೇಶ್ ಕುಮಾರ್, ಸಚಿಂದ್ರ, ನಾಗಶ್ರೀ, ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.