ಅಥಣಿ: ಎರಡು ಬೈಕಗಳ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟು ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಜತ್ತ – ಜಾಂಬೋಟ ಮುಖ್ಯ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಬಳ್ಳಿಗೇರಿ ಗ್ರಾಮದಮಲ್ಲಯ್ಯ ಮಠಪತಿ(21) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನೋರ್ವ ವ್ಯಕ್ತಿ ಮಹಾರಾಷ್ಟ್ರದ ವಜ್ರವಾಡ ಗ್ರಾಮದ ಯುವಕನಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.