ಬೆಂಗಳೂರು, ಮೇ.16: ಬರಗಾಲದಿಂದ ಬೆಂದು ಹೋಗಿರುವ ರೈತರ ನೆರವಿಗೆ ಸರ್ಕಾರ ಬಾರದೆ ಕೈಕಟ್ಟಿ ಕುಳಿತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಅವರ ಹಾಕಿರುವ ಅವರು, ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ ಬರದಿಂದ ನಲುಗಿ ಹೋಗಿದ್ದಾರೆ, ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದೆ ಎಂದು ಕಿಡಿ ಕಾರಿದ್ದಾರೆ.
ಬರ ಪರಿಹಾರದ ಹಣವನ್ನು ಬ್ಯಾಂಕುಗಳು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ, ಇದು ಅತ್ಯಂತ ಕ್ರೂರ ಎಂದು ಎಚ್ಡಿಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ಬರ ಪರಿಹಾರದ ಹಣವನ್ನು ಬ್ಯಾಂಕುಗಳು ರೈತರ ಸಾಲಕ್ಕೆ ಮನ್ನಾ ಮಾಡಿಕೊಳ್ಳಕೂಡದು ಈ ಬಗ್ಗೆ ಸರ್ಕಾರ ಬ್ಯಾಂಕುಗಳಿಗೆ ತಾಕೀತು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಸಾಲ ನೀಡಿರುವ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ಕರೆದು ಗಂಭೀರ ಚರ್ಚೆ ನಡೆಸಬೇಕು, ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳಬಾರದೆಂದು ಆದೇಶಿಸಬೇಕು ಎಂದು ಹೆಚ್ ಡಿ ಕೆ ಒತ್ತಾಯಿಸಿದ್ದಾರೆ.