Tue. Dec 24th, 2024

ಕಾರು,ದ್ವಿಚಕ್ರವಾಹನ ಡಿಕ್ಕಿ:ಸ್ಥಳದಲ್ಲೇ ಮಹಿಳೆ ಸಾವು

Share this with Friends

ಮೈಸೂರು, ಮೇ. 17: ಕಾರು ಮತ್ತು ದ್ವಿಚಕ್ರವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ರಾಧಾ (34) ಎಂದು ಗುರುತಿಸಲಾಗಿದೆ.

ಬೆಳಗ್ಗೆ 6 ಗಂಟೆಗೆ‌ ನಗರದ ಕೆಆರ್ ಎಸ್ ರಸ್ತೆಯಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ರಾಧಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿವಿಪುರಂ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾರಿನಲ್ಲಿದ್ದ ನಾಲ್ಕೈದು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Share this with Friends

Related Post