Mon. Dec 23rd, 2024

ಹೆಚ್.ಡಿ.ಡಿ ಜೀವ ಬಲಿ ಪಡೆಯಲು ಕಾಂಗ್ರೆಸ್ ಸರಕಾರ ಸಂಚು:ಜೆಡಿಎಸ್

Share this with Friends

ಬೆಂಗಳೂರು,ಮೇ.19: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತ ಟಾರ್ಗೆಟ್ ಮಾಡಿದೆ.

ಜೆಡಿಎಸ್ ಪಕ್ಷ ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿದ್ದು,ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಬಿದ್ದಿದೆ ಎಂದು ಟೀಕಿಸಿದೆ.

ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ, ಕಾಂಗ್ರೆಸ್ಸಿಗರೇ ಸತ್ಯ ನಿಮ್ಮ ಮುಂದೆಯೇ ಇದೆ ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್, ಸಿಡಿ ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್ ಎಂದು ಜೆಡಿಎಸ್ ಕಾರವಾಗಿ ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು, ಮಾಜಿ ಸಿಎಂ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು,ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು. ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು ಕಾಂಗ್ರೆಸ್ ನಾಯಕರ ಸಂಚಾಗಿದೆ ಎಂದು ಕಿಡಿಕಾರಿದೆ.

ಈ ಸಂಚು ಜಾರಿಗೆ ಸಿಡಿ ಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ 100 ಕೋಟಿ,ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ 100 ಕೋಟಿ ಆಫರ್,ಅಡ್ವಾನ್ಸ್ ಆಗಿ 5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ ಮಾಡಿದ್ದಾರೆ ಎಂದು ಜೆಡಿಎಸ್ ಜರಿದಿದೆ.

ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ ಸಿಡಿ ಶಿವಕುಮಾರ್,
ಮೋದಿ, ಕುಮಾರಸ್ವಾಮಿ ಅವರ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ ಸಿಡಿ ಶಿವಕುಮಾರ್
ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್ ಎಂದು ಬಹಳ ಗಂಬೀರ ಆರೋಪಗಳನ್ನು ಮಾಡಿದೆ.


Share this with Friends

Related Post