ಬೆಂಗಳೂರು,ಮೇ.2: ಪೆನ್ ಡ್ರೈವ್ ಲೀಕ್ ಕೇಸ್ ನ ಆಡಿಯೋ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ನಾವು ಹೇಳಿ ಆಯ್ತು, ಇಷ್ಟೆಲ್ಲ ಪ್ರಕರಣದಲ್ಲಿ ಭಾಗಿಯಾದ ಮೇಲೂ ಅವರನ್ನು ಮುಂದುವರಿಸಿರೋದು ನೋಡಿದರೆ ಸರ್ಕಾರ ಇಂತಹವರಿಗೆ, ತಪ್ಪಿತಸ್ಥರಿಗೆ ರಕ್ಷಣೆ ಕೊಡೋಕೆ ಇರೋದು ಎಂದು ವಾಗ್ದಾಳಿ ನಡೆಸಿದರು.
ಡಿ.ಕೆ ಶಿವಕುಮಾರ್ ಇದರಲ್ಲಿ ಏನೇನು ಮಾಡಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ, ಆದರೂ ಅವರನ್ನ ರಕ್ಷಣೆ ಮಾಡೋ ಕೆಲಸ ಮಾಡ್ತಿದ್ದಾರೆ ಸರ್ಕಾರ ಮುಂದೆ ಇದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಹೆಚ್ ಡಿ ಕೆ ಎಚ್ಚರಿಸಿದರು
ಈ ನೆಲದ ಕಾನೂನಿನಲ್ಲಿ ಯಾರೇ ಇದ್ದರೂ ತಲೆ ಬಾಗಲೇಬೇಕು. ನಿತ್ಯ ಹಣ, ಅಧಿಕಾರ ದುರುಪಯೋಗ ಪಡಿಸಿಕೊಂಡು ಬಹಳ ದಿನ ಉಳಿಯೋದಕ್ಕೆ ಆಗೋದಿಲ್ಲ,ಎಲ್ಲದಕ್ಕೂ ಅಂತಿಮ ದಿನಗಳು ಬರುತ್ತವೆ ಎಂದು ಹೇಳಿದರು.
ಪೆನ್ ಡ್ರೈವ್ ಕೇಸನ್ನ ಸಿಬಿಐ ತನಿಖೆಗೆ ಕೊಡಲು ಕಾನೂನು ಹೋರಾಟ ಮಾಡುತ್ತೇವೆ,ನಾವು ಏನು ಮಾಡಬೇಕೆಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇವೆ, ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದೆಲ್ಲಾ ಮಾಡುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಡಿಕೆಶಿ ಆಡಿಯೋ ರಿಲೀಸ್ ಮಾಡಿದ್ದ ದೇವರಾಜೇಗೌಡಗೆ ಜೈಲಿನಲ್ಲಿ ಥ್ರೆಟ್ ಇರಬಹುದು ಎಂಬ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಆರೋಪಕ್ಕೆ ಪ್ರತಿಕ್ರಿಯಿಸಿ, ದೇವರಾಜೇಗೌಡ ಜೀವಕ್ಕೆ ಆಪತ್ತು ಇರಬಹುದು ಎಂದು ಹೇಳಿದರು.