ಬೆಂಗಳೂರು, ಮೇ.22: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸುಳ್ಳು ಮಾಹಿತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಡುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ನಾಯಕರು ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.
ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ತೆರಳಿದ ವಿಧಾನ ಪರಿಷತ್ ಸದಸ್ಯರಾದ ಕೆ.ಎ ತಿಪ್ಪೇಸ್ವಾಮಿ, ಮಂಜೇಗೌಡ, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ರಂಗನಾಥ್, ಬೆಂಗಳೂರು ಘಟಕದ ಅಧ್ಯಕ್ಷ ಎಚ್.ಎಂ ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತುಪಲ್ಲಿ ಅವರ ನೇತೃತ್ವದ ತಂಡ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿತು.
ಶಿವಮೊಗ್ಗ ಮತ್ತು ರಾಯಚೂರಿನ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ದಾರೆ ಎಂಬಂತಹ ಹೇಳಿಕೆ ನೀಡಿದ್ದಾರೆಂದು ಜೆಡಿಎಸ್ ಆರೋಪಿಸಿ ಈ ಮನವಿ ಸಲ್ಲಿಸಿತು.
ರಾಹುಲ್ ಗಾಂಧಿ ಚುನಾವಣೆ ಪ್ರಚಾರದ ವೇಳೆ ಪತ್ರಿಕೆಗಳಲ್ಲಿ ಮತ್ತು ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಜೆಡಿಎಸ್ ನಾಯಕರು ಮನವಿಯಲ್ಲಿ ತಿಳಿಸಿದ್ದಾರೆ.
ಅಲ್ಲದೆ ಈವರೆಗೆ ರಾಹುಲ್ ಗಾಂಧಿಯವರಿಗೆ ಎಸ್ಐಟಿ ನೋಟೀಸ್ ನೀಡಿಲ್ಲವೆಂದು ಜೆಡಿಎಸ್ ದೂರಿತು.