Fri. Nov 1st, 2024

ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾಗೆ ನೈತಿಕತೆ ಇಲ್ಲ: ಸಿಎಂ ವ್ಯಂಗ್ಯ

Share this with Friends

ಬೆಂಗಳೂರು,ಫೆ.11: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬರಿಗೈಲಿ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಬರಿಗೈಲಿ ಬಂದ ಅಮಿತ್ ಶಾ‌ ಅವರಿಗೆ ಬಡವರು, ರೈತರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಟೀಕಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ, ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು,ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ ಕಾರವಾಗಿ ಪ್ರಶ್ನಿಸಿದರು.

ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈಗ ಅವರು ಬಿಜೆಪಿ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನೋ ಹೆಳುತ್ತಿದ್ದಾರೆ.

ಅವರು ಯಜಮಾನರು,ಮಾಜಿ ಪ್ರಧಾನಿಗಳಾಗಿದ್ದವರು ಅಂತವರು ಹೀಗೆ ಹೇಳಬಾರದು ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದರು

ಚುನಾವಣೆ ರಣಕಹಳೆ ಮೈಸೂರಿನಿಂದಲೇ ಅಮಿತ್ ಶಾ ಮೊಳಗಿಸಲಿ,ಆದರೆ ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.


Share this with Friends

Related Post