Wed. Dec 25th, 2024

ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ ಉಗ್ರರ ಕೈಯಲ್ಲಿ ಬಾಂಬ್ ಕೊಟ್ಟಂತೆ:ಅಶೋಕ್

Share this with Friends

ಬೆಂಗಳೂರು, ಮೇ.25:ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ,ರೌಡಿಗಳ ಕೈಯಲ್ಲಿ ಮಚ್ಚು ಲಾಂಗು,ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂತೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಎಂದು ಎಕ್ಸ್ ನಲ್ಲಿ ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು, ರೌಡಿ ಶೀಟರ್ ಗಳು, ಕೊಲೆಗಡುಕರು, ಬಾಂಬು, ಮಚ್ಚು, ಲಾಂಗು ಹಿಡಿದು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದಾರೆ.

ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ನಡೆದಿರುವ ಘಟನೆ ಇವನ್ನೆಲ್ಲ ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರೇ, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಹತ್ಯೆಗಳು, ಅತ್ಯಾಚಾರಗಳು, ಗ್ಯಾಂಗ್ ವಾರ್ ಗಳು, ಗಾಂಜಾ ಮಾರಾಟ ದಂಧೆಗಳು, ರೇವ್ ಪಾರ್ಟಿಗಳು, ಕೋಮು ಗಲಭೆಗಳು, ಗಲಾಟೆಗಳಿಂದ ಕರ್ನಾಟಕದ ಗೌರವ ಮಣ್ಣುಪಾಲಗುತ್ತಿದೆ. ನಿಮ್ಮ ಕೈಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಕನ್ನಡಿಗರು ನೆಮ್ಮದಿಯಿಂದ ಬದುಕಲು ಬಿಡಿ ಎಂದು ಅಶೋಕ್ ಆಗ್ರಹಿಸಿದ್ದಾರೆ. ಕಮಲ


Share this with Friends

Related Post