ರಾಜ್ ಕೋಟ್,ಮೇ.25: ಶನಿವಾರ ಗುಜರಾತ್ ನ ರಾಜ್ ಕೋಟ್ ನ ಸಿಆರ್ ಪಿ
ಗೇಮಿಂಗ್ ವಲಯದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿ 24 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರು ಬಹಳಷ್ಟು ಮಕ್ಕಳೇ ಎಂದು ಗೊತ್ತಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಂದಿಸಲು ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತರಲು ಶ್ರಮಿಸುತ್ತಿವೆ.
ಎಸಿ ಮಿಷನ್ ಲೀಕ್ ಆಗಿ ಸಿಡಿದು ಬೆಂಕಿ ಹೊತ್ತಿ ಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್‌ಕೋಟ್ ಪೊಲೀಸ್ ಕಮಿಷನರ್ ರಾಜು ಭಾರ್ಗವ್ ಮಾತನಾಡಿ, ಹಲವಾರು ಜನರು ಒಳಗೆ ಸಿಲುಕಿರುವ ಶಂಕೆ ಇದೆ ಮತ್ತು ಬೆಂಕಿ ಪೂರ್ಣ ನಂದಿದ ನಂತರ ಸ್ಪಷ್ಟ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದಾರೆ.
ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ,
ಅಲ್ಲದೆ ಮೃತರ ಕುಟುಂಬಕ್ಕೆ ತಲಾ 4ಲಕ್ಷ ನೀಡುವುದಾಗಿ ತಿಳಿಸಿದ್ದಾರೆ.ಗಾಯಾಳುಗಳ ಚಿಕಿತ್ಸೆಯನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.
ರಾಜ್‌ಕೋಟ್‌ನ ಗೇಮಿಂಗ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ ಎಂದು ಭೂಪೇಂದ್ರ ಪಟೇಲ್ ಹೇಳಿದ್ದಾರೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ದಿಗ್ಭ್ರಮೆ ವ್ಯಕ್ತಪಡಿಸಿದ್ದು,ಮೃತರಿಗೆ ಸಂತಾಪ ಸೂಚಿಸಿದ್ದಾರೆ.ತಕ್ಷಣವೇ ತನಿಖೆ ನಡೆಸಿ 24 ಗಂಟೆಯಲ್ಲಿ ವರದಿ ನೀಡುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ.