ಮೈಸೂರು, ಮೇ.26: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ,ಆದರೆ ಯಾವುದೇ ಅಭಿವೃದ್ಧಿ ಆಗದ ಕಾರಣ ಜನ ಆಕ್ರೋಶ ಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದರು.
ಮೈತ್ರಿ ಅಭ್ಯರ್ಥಿ ವಿವೇಕಾನಂದ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ಸಭೆ ವೇಳೆ ವಿಜಯೇಂದ್ರ ಮಾತನಾಡಿದರು.
ಕಾನಾನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು,ಲಾಲು ಪ್ರಸಾದ್ ಯಾದವ್ ಅವರ ಬಿಹಾರ ನೆನಪಾಗುತ್ತಿದೆ ಎಂದು ಟೀಕಿಸಿದರು.
ದಾವಣಗೆರೆ ಚೆನ್ನಗಿರಿಯಲ್ಲಿ ಪೊಲೀಸ್ ಮೇಲೆ ಹಲ್ಲೆ ನಡೆಸಿ ಠಾಣೆಯನ್ನು ಧ್ವಂಸ ಮಾಡಿದ್ದಾರೆ,ಇದನ್ನೆಲ್ಲ ನೋಡಿದರೆ
ಇದು ಅಸಮರ್ಥ ಸರ್ಕಾರ ಎಂದು ಗೊತ್ತಾಗುತ್ತಿದೆ ಎಂದು ದೂರಿದರು.
ಕಳೆದ ಎರಡು ತಿಂಗಳಿಂದ ಹತ್ಯೆಗಳು ಹೆಚ್ಚಾಗಿವೆ, ಲವ್ ಜಿಹಾದ್ ಆಗುತ್ತಿರುವುದನ್ನು ನೋಡಿದರೆ ರಾಜ್ಯದಲ್ಲಿ
ಸಿಎಂ ಗೃಹ ಸಚಿವರು ಇದ್ದಾರಾ ಅನ್ನಿಸುತ್ತಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಹೋಗಬೇಕಿದೆ,ದೇಶದಲ್ಲಿ ಮೋದಿ ಪ್ರಧಾನಿ ಮಂತ್ರಿಯಾಗಬೇಕು ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ,
ಲೋಕಸಭೆ ಚುನಾವಣೆಯಲ್ಲಿ ಯದುವೀರ್ ಪರವಾಗಿ ಬಿಜೆಪಿ ನಾಯಕರ ಜೊತೆಗೆ ಜೆಡಿಎಸ್ ನಾಯಕರೂ ಶ್ರಮಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಫಲಿತಾಂಶವನ್ನು ನಾವು ಎದುರು ನೋಡುತ್ತಿದ್ದೇವೆ,ಕಾಂಗ್ರೆಸ್ ನವರು
ಹಣದ ಮೂಲಕ ಚುನಾವಣೆ ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ,ಅದನ್ನ ರಾಜ್ಯದ ಜನ ಸುಳ್ಳು ಮಾಡಲಿದ್ದಾರೆ ಎಂದು ಭವಿಷ್ಯ ನುಡಿದರು.
ವಿಧಾನಪರಿಷತ್ ನ 6 ಕ್ಷೇತ್ರಗಳ ಪೈಕಿ ಬಿಜೆಪಿ ನಾಲ್ಕು, ಜೆಡಿಎಸ್ 2 ರಲ್ಲಿ ಸ್ಪರ್ಧೆ ಮಾಡಿದೆ,
ಪಕ್ಷ ನಿರ್ಧಾರ ಮಾಡಿದ ಮೇಲೆ ಅವರ ಗೆಲುವಿಗೆ ನಾವೆಲ್ಲ ದುಡಿಯಬೇಕು ಎಂದು ವಿಜಯೇಂದ್ರ ಹೇಳಿದರು.
ಯುವಕರ ಭವಿಷ್ಯಕ್ಕೆ ಮೋದಿಯವರು ರಾಷ್ಟೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದರು,ಆದರೆ
ಕಾಂಗ್ರೆಸ್ ಸರ್ಕಾರ ಬಂದ ಒಂದೇ ತಿಂಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ, ಮೈತ್ರಿ ಅಭ್ಯರ್ಥಿ ವಿವೇಕಾನಂದ, ಶಾಸಕ ಶ್ರೀವತ್ಸ, ಎಂಎಲ್ ಸಿ ಸಿ ಎನ್ ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ನಿರಂಜನ್ ಕುಮಾರ್, ಸಾರಾ ಮಹೇಶ್ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.