Tue. Dec 24th, 2024

ಶುಕ್ರವಾರ ಎಸ್ಐಟಿ ಮುಂದೆ ಹಾಜರಾಗುವೆ:ಪ್ರಜ್ವಲ್‌ ರೇವಣ್ಣ

Share this with Friends

ಬೆಂಗಳೂರು,ಮೇ.27: ಲೋಕಸಭಾ ಚುನಾವಣೆ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ದಿಢೀರ್ ಪ್ರತ್ಯಕ್ಷರಾಗಿದ್ದಾರೆ.

ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದು,
ವಿದೇಶದಿಂದ ವಿಡಿಯೋ ರಿಲೀಸ್‌ ಮಾಡಿದ್ದಾರೆ.

ಬೆಂಗಳೂರಿಗೆ ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ, ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್‌ ಕ್ಷಮೆ ಯಾಚಿಸಿದ್ದಾರೆ.

ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು, ವಿದೇಶಕ್ಕೆ ಹೋಗುವಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ, ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್‌ ನ್ಯೂಸ್‌ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಗೊತ್ತಾಗಿದೆ,ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ, ಎಸ್‌ಐಟಿ ನೋಟಿಸ್‌ ನೀಡಿದ ವಿಚಾರ ಗೊತ್ತಾಯಿತು,ನಾನು ರಾಜಕೀಯವಾಗಿ ಬೆಳೆದುಬಿಡುತ್ತೇನೆ ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ‌

ನನ್ನ ಮೇಲೆ ರಾಜಕೀಯ ಪಿತೂರಿ ಮಾಡಲಾಗಿದೆ. ಚುನಾವಣೆ ಸಮಯದಲ್ಲಿ ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರ ಆರೋಪದಿಂದ ನಾನು ಮಾನಸಿಕ ಖಿನ್ನತೆಗೆ ಒಳಗಾದೆ, ಈ ಖಿನ್ನತೆಯಿಂದ ಹೊರ ಬರಲು ಕೆಲ ಸಮಯ ಬೇಕಾಗಿತ್ತು. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ, ನನ್ನ ನಂಬಿರುವ ಜನರ ಆಶೀರ್ವಾದ,ನನ್ನ ಕುಟುಂಬದವರ ಆಶೀರ್ವಾದ ಇದೆ, ಈ ಸುಳ್ಳು ಪ್ರಕರಣದಿಂದ ನಾನು ಹೊರ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.


Share this with Friends

Related Post