Tue. Dec 24th, 2024

ನೇಣು ಬಿಗಿದುಕೊಂಡು ಅಧಿಕಾರಿ‌ ಆತ್ಮಹತ್ಯೆ

Share this with Friends

ಶಿವಮೊಗ್ಗ,ಮೇ.27: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿನೋಬಾನಗರದ ಕೆಂಚಪ್ಪ ಲೇಔಟ್ ನ‌ ನಿವಾಸದಲ್ಲಿ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ. ಈ ಪೈಕಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳು ಮಾಡಿದ ತಪ್ಪುತನ್ನ ಮೇಲೆ ಹಾಕುತ್ತಿದ್ದಾರೆ, ನನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಡೆತ್ ನೋಟ್ ನಲ್ಲಿ ಚಂದ್ರಶೇಖರ್ ಬರೆದಿದ್ದಾರೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ಹಾಗೂ ಯೂನಿಯನ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶುಚಿಸ್ಮಿತ ತನ್ನ ಸಾವಿಗೆ ಕಾರಣ ಎಂದು ಬರೆದಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this with Friends

Related Post