ಮೈಸೂರು,ಮೇ.28: ವಿಧಾನಸಭೆಚುನಾವಣೆ ವೇಳೆ ಡಿ.ಕೆ ಶಿವಕುಮಾರ್ ಗಡ್ಡದ ಬಗ್ಗೆ ಮಾತಾಡಿ ಬಿಜೆಪಿ 130 ರಿಂದ 60 ಕ್ಕೆ ಇಳಿದರು,ಈಗ ನನ್ನ ಕೂದಲ ಬಗ್ಗೆ ಮಾತಾಡಿ 26 ರಿಂದ 6 ಕ್ಕೆ ಬರುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಬಿಜೆಪಿಯವರು
ಮಾತನಾಡಿದ್ರಾ,ಮೋದಿ ಅವರು ಕೋವಿಡ್ ಟೈಂ ನಲ್ಲಿ ಗಡ್ಡ ಬಿಟ್ಟಿದ್ರು ಅದನ್ನು ಪ್ರಶ್ನಿಸಿದ್ದರಾ ಎಂದು ಕೇಳಿದರು.
ನನ್ನ ಹೇರ್ ಸ್ಟೈಲ್ ಬಗ್ಗೆ ಮಾತಾಡೋದು ಒಂದು ವಿಷಯಾನಾ ಅದೆಲ್ಲಾ ಅವರಿಗೆ ಏಕೆ ಬೇಕು ಎಂದು ತಿರುಗೇಟು ನೀಡಿದರು.
ಕೆಲ ಮಕ್ಕಳು ನಮ್ಮ ಶಿಕ್ಷಣ ಸಚಿವರು ಒಳ್ಳೇ ಹೇರ್ ಸ್ಟೈಲ್ ನಲ್ಲಿದ್ದಾರೆ ನಮಗ್ಯಾಕೆ ಆ ಥರ ಸ್ಟೈಲ್ ನಲ್ಲಿ ಬಿಡೋಕೆ ಅವಕಾಶ ಇಲ್ಲ ಅಂತಾ ಕೇಳುತ್ತಾರೆ ಏನು ಮಾಡೋದು ಹೇಳಿ ಎಂದರು.
ಹೇರ್ ಕಟ್ ಮಾಡಲು ಅದು ಯಾರು ಬರುತ್ತಾರೋ ಅವರು ನಾನು ಟೈಂ ಕೊಟ್ಟಾಗ ಬರಲಿ, ಅವರ ತಜ್ಞತೆ ನೋಡಿ ಆ ಕೆಲಸ ಕೊಡುತ್ತೇನೆ,ನನ್ನ ಕೂದಲು ಚೆನ್ನಾಗಿದೆ,ತಲೆ ಒಳಗಿನ ಮೆದುಳೂ ಚೆನ್ನಾಗಿದೆ
ಅವರಂತೆ ನನಗೆ ಯಾವ ದುರ್ಭದ್ದಿಯೂ ಇಲ್ಲ ಎಂದು ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.
ನನ್ನ ತಂದೆ ನನಗೆ ಒಳ್ಳೆ ಬುದ್ದಿ ಕಲಿಸಿದ್ದಾರೆ. ನನ್ನ ಹೇರ್ ಸ್ಟೈಲ್ ಬಗ್ಗೆ ನನ್ನ ತಂದೆಗೆ ಬಹಳ ಪ್ರೀತಿ ಇತ್ತು, ನನಗೆ ಅವರೇ ಸ್ಪೂರ್ತಿ, ಅವರಂತೆ ಛೋಟಾ ಸೈನ್ ಮಾಡುವ ವ್ಯವಹಾರ ನನಗೆ ಗೊತ್ತಿಲ್ಲ
ಜೂ. 4 ಆಗಲಿ ನಂತರ ವಿಜಯೇಂದ್ರ ಅವರಿಗೆ ಬೇರೆಯದೆ ಕೆಲಸ ಕೊಡುತ್ತೇನೆ ತಿರುಗೇಟು ನೀಡಿದರು.
ಪರಿಷತ್ ಚುನಾವಣೆ ಅಭ್ಯರ್ಥಿಗಳ ಪರವಾಗಿ ಮತಯಾಚನೆಗೆ ಬಂದಿದ್ದೇನೆ.
ಮರಿತಿಬ್ಬೆಗೌಡರು ಶಿಕ್ಷಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇದೇ ವೇಳೆ ಮಧು ಬಂಗಾರಪ್ಪ ತಿಳಿಸಿದರು.
ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿವೆ.
ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆ ಇದೆ
12 ಸಾವಿರ ಶಿಕ್ಷಕರನ್ನ ಈಗ ನೇಮಕ ಮಾಡಲಾಗಿದೆ,ಅನುದಾನಿತ ಶಾಲೆಗಳ 6 ಸಾವಿರ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ,ಹಂತ ಹಂತವಾಗಿ ಎಲ್ಲಾ ಸಮಸ್ಯೆಯನ್ನೂ ಬಗೆಹರಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದರು.