Mon. Dec 23rd, 2024

ಬೆಳ್ಳೂರು ಘಟನೆ:ಪಿಎಸ್‌ಐ‌ ಅಮಾನತು

Share this with Friends

ಮಂಡ್ಯ,ಮೇ.29: ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ‌ ಅಮಾನತುಗೊಂಡಿದ್ದಾರೆ.

ಬೆಳ್ಳೂರು ಠಾಣೆಯ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಕರ್ತವ್ಯ ಲೋಪ ಕಾರಣ ನೀಡಿ ಮಂಡ್ಯ ಎಸ್‌ಪಿ ಎನ್.ಯತೀಶ್ ‌ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ.

ಬೆಳ್ಳೂರಿನಲ್ಲಿ ಕಾರು ಓವರ್ ಟೇಕ್ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಯುವಕರ ಮಧ್ಯೆ ಗಲಾಟೆಯಾಗಿತ್ತು, ಬಳಿಕ ಅಭಿಲಾಷ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿತ್ತು.

ಈ ಬಗ್ಗೆ ದೂರು ಸ್ವೀಕರಿಸದೆ ಪಿಎಸ್‌ಐ ಬಸವರಾಜ ಚಿಂಚೋಳಿ ನಿರ್ಲಕ್ಷ್ಯ ತೋರಿದ್ದರು ಎಂದು ಆರೋಪ ಮಾಡಲಾಗಿತ್ತು.

ಸೋಮವಾರ ರಾತ್ರಿ 7 ಗಂಟೆ ಸಮಯದಲ್ಲಿ ಮುಸ್ಲಿಂ ಯುವಕರ ಗುಂಪು ಮತ್ತೆ ದಾಂಧಲೆ ಮಾಡಿತ್ತು, ಈ ವೇಳೆ ಅಭಿಲಾಷ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೆಲ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿದ್ದರು,ಜತೆಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಳ್ಳೂರು ಗ್ರಾಮಸ್ಥರು ಪ್ರತಿಭಟನೆ ಕೂಡಾ ನಡೆಸಿದ್ದರು.

ಪ್ರಕರಣದ ಗಂಭೀರತೆ ಅರಿತು ಪೊಲೀಸರು ಈ ಸಂಬಂಧ ದೂರು ಸ್ವೀಕಾರ ಮಾಡಿದರು.

ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿದೆ, ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ದೂರು ನೀಡಲಾಗಿತ್ತು. ಇದೀಗ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಎಸ್‌ಪಿ ಯತೀಶ್ ಅಮಾನತು ಮಾಡಿದ್ದಾರೆ.


Share this with Friends

Related Post