Mon. Dec 23rd, 2024

ರಾಜ್ಯಪಾಲರ ಭಾಷಣಕ್ಕೆ ವಿಪಕ್ಷ ನಾಯಕರು ಪ್ರತಿಕ್ರಿಯೆ ಏನು..?

R Ashok And Bommai
Share this with Friends

ಬೆಂಗಳೂರು : ಇಷ್ಟೊಂದು ಸಪ್ಪೆ, ನಿರಾಸೆಯ ರಾಜ್ಯಪಾಲರ ಭಾಷಣ ಯಾವತ್ತೂ ಕೇಳಿರಲಿಲ್ಲ :
ಇಷ್ಟೊಂದು ಸಪ್ಪೆ ಹಾಗೂ ನಿರಾಸೆಯ ರಾಜ್ಯಪಾಲರ ಭಾಷಣ ಯಾವತ್ತೂ ಕೇಳಿರಲಿಲ್ಲ ಎಂದು ಅಭಿಪ್ರಾಯಪಟ್ಟರು.ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೋಧಿ ಸರ್ಕಾರ ಇರುವುದನ್ನು ತೋರಿಸುತ್ತದೆ.‌ಯಾವುದೇ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ ಎಂದು ಆರೋಪಿಸಿದರು.ಜಲಜೀವನ್ ಮಿಷನ್, ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿದ್ದೇವೆ. ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ‌. ನೀರಾವರಿಗೆ 10 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂದು ದಾಖಲೆ ನೀಡಲಿ ಎಂದು ಒತ್ತಾಯಿಸಿದರು.

‘ಕಾಂಗ್ರೆಸ್’ಗೆ ಮಾನ ಮರ್ಯಾದೆ ಇಲ್ಲ :
ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ್ದಲ್ಲದೆ ಬಿಜೆಪಿಯ ಯೋಜನೆಗಳನ್ನು ತಮ್ಮದೇ ಯೋಜನೆಯಾಗಿ ಬಿಂಬಿಸಿಕೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನು ಹೇಳಿಸಿದೆ. ಹಿಂದಿನ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು, ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ. ಐದು ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದ್ದರೂ ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ. ಬರ ಪರಿಹಾರ ಕೊಟ್ಟಿದ್ದೇವೆ ಎನ್ನುತ್ತಾರೆ. ಆದರೆ ಪರಿಹಾರವನ್ನು ಕಂತಾಗಿ ನೀಡಬಾರದು. ಹಿಂದಿನ ಬಿಜೆಪಿ ಸರ್ಕಾರ ಪರಿಹಾರವನ್ನು ಒಂದೇ ಸಲಕ್ಕೆ ರೈತರ ಖಾತೆಗೆ ಹಾಕಿತ್ತು. ಈ ಸರ್ಕಾರ ಕಂತು ಕಂತಾಗಿ ನೀಡುವುದು ತಪ್ಪು. ನಾವು 25 ಸಾವಿರ ರೂ. ಪರಿಹಾರ ಕೇಳಿದ್ದರೆ, ಆ ವಿಷಯವನ್ನು ಪ್ರಸ್ತಾಪಿಸಿಲ್ಲ. ಕೇವಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲಾಗಿದೆ ಎಂದು ದೂರಿದರು.


Share this with Friends

Related Post