Mon. Dec 23rd, 2024

ಭವಾನಿ ರೇವಣ್ಣಗೆ ಇನ್ನೊಂದು ನೋಟೀಸ್ ನೀಡಿದ ಎಸ್ ಐ ಟಿ

Share this with Friends

ಹಾಸನ,ಮೇ.31: ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್ ನೀಡಿದೆ.

ಮೇ.5 ರಂದು ನೀಡಿದ ನೋಟಿಸ್‌ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಆದರೆ ಈ ಹಿಂದೆ ನೀಡಿದ್ದ ನೋಟಿಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನೀವು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆ,ಆದ್ದರಿಂದ ಜೂ.1 ರಂದು ಖುದ್ದು ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭದಲ್ಲಿ ಮನೆಯಲ್ಲಿ ಹಾಜರಿರಬೇಕು ಎಂದು ಎಸ್‌ಐಟಿ ಅಧಿಕಾರಿಗಳು ನೋಟಿಸ್ ನಲ್ಲಿ ಬವಾನಿ ಅವರಿಗೆ ತಿಳಿಸಿದ್ದಾರೆ.

ಆದರೆ, ಕಳೆದ ಹದಿನೈದು ದಿನಗಳಿಂದ ಭವಾನಿ ರೇವಣ್ಣ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರ್ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ರೇವಣ್ಣ ಹಾಜರಿದ್ದರು. ಮೇ 6 ರಂದು ಅವರನ್ನು ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭೇಟಿಯಾಗಿದ್ದರು. ಭೇಟಿ ಬಳಿಕ ಮನೆಯಿಂದ ಹೋದವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಜೈಲುಪಾಲಾಗಿದ್ದ ಪತಿ ರೇವಣ್ಣ ಅವರನ್ನೂ ಭೇಟಿಯಾಗಿರಲಿಲ್ಲ, ಜೈಲಿನಿಂದ ಬಿಡುಗಡೆ ಆದರೂ ಪತಿಯನ್ನ ಭೇಟಿಯಾಗಲು ಬಂದಿರಲಿಲ್ಲ. ಕಳೆದ ಹದಿನೈದು ದಿನಗಳಿಂದಲೂ ನಿಗೂಢ ಸ್ಥಳದಲ್ಲೇ ಇದ್ದಾರೆ ಆದರೆ,ಭವಾನಿ ರೇವಣ್ಣ ಎಲ್ಲಿದ್ದಾರೆಂಬ ಬಗ್ಗೆ ಎಸ್‌ಐಟಿ ಮಾಹಿತಿ ಕಲೆ ಹಾಕುತ್ತಿದೆ.

ನ್ಯಾಯಾಲಯದಲ್ಲಿ ಇಂದು ನಿರೀಕ್ಷಣಾ ಅರ್ಜಿ ವಜಾ ಆದರೆ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದೆ.


Share this with Friends

Related Post