Mon. Dec 23rd, 2024

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳು ಎಸ್ಐಟಿ ವಶಕ್ಕೆ

Share this with Friends

ಬೆಂಗಳೂರು,ಜೂನ್.1: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣ ಸಂಬಂಧ ವಿಶೇಷ ತನಿಖಾ ದಳ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್ಐಟಿ ವಶದಲ್ಲಿರುವ ಈ ಇಬ್ಬರು ಅಧಿಕಾರಿಗಳು ವಿಚಾರಣೆ ವೇಳೆ ಸಚಿವರ ಹೆಸರು ಹೇಳಿದರೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಎಸ್​ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ್ ಬರೆದಿದ್ದಾರೆ ಎನ್ನಲಾಗಿದೆ.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದ್ದು, ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಕೂಡಾ ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.


Share this with Friends

Related Post