Mon. Dec 23rd, 2024

ಸಮೀಕ್ಷೆಯಲ್ಲಿ ಎನ್‌ಡಿಎ ಕೂಟಕ್ಕೆ ಬಹುಮತ:ರಾಹುಲ್ ಗಾಂಧಿ ವ್ಯಂಗ್ಯ

Share this with Friends

ನವದೆಹಲಿ,ಜೂ.2: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಬಹುಮತ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿದ್ದರೆ,ರಾಹುಲ್ ಗಾಂಧಿ ಮಾತ್ರ ಟೀಕಿಸಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಮೀಡಿಯಾ ಪೋಲ್‌, ಮೋದಿ ಫ್ಯಾಂಟಸಿ ಪೋಲ್‌ ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಇಂಡಿಯಾ ಒಕ್ಕೂಟ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಗಾ, ಸಿಧು ಮೂಸೆವಾಲಾ ಅವರ ಸಾಂಗ್‌ ಕೇಳಿದ್ದೀರಲ್ಲ,295 ಸ್ಥಾನ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Share this with Friends

Related Post