ಉಡುಪಿ,ಜೂ.2: ಪ್ರಜ್ವಲ್ ರೇವಣ್ಣ ಮೇಲಿರುವ ಆರೋಪದ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಉದ್ಯಮಿ ಶ್ರೇಯಸ್ ನಾಯ್ಕ (25) ಎಂಬಾತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ.
ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ,ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದಂತೆ ಆತ ನಾಪತ್ತೆಯಾಗಿದ್ದಾನೆ.
ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಹಾಕಿಕೊಳ್ಳುತ್ತಿದ್ದ.
ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ, ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆನ್ನಲಾಗಿದೆ.
ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ, ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ.
ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗಿದೆ.