Mon. Dec 23rd, 2024

ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಅಧಿಕಾರದ ಗದ್ದುಗೆ

Share this with Friends

ನವದೆಹಲಿ,ಜೂ.2: ಸತತ ಮೂರನೇ ಬಾರಿಗೆ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ.

60 ಸದಸ್ಯ ಬಲದ ಅರುಣಾಚಲ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ 39 ಸ್ಥಾನಗಳನ್ನು ಗೆದ್ದು ಬಹುಮತ ಪಡೆದುಕೊಂಡಿದೆ.

ಬಿಜೆಪಿ ಸತತ ಮೂರನೇ ಬಾರಿಗೆ ಅರುಣಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 19 ರಂದು ಈಶಾನ್ಯ ರಾಜ್ಯದಲ್ಲಿ 50 ಸ್ಥಾನಗಳಿಗೆ ನಡೆದ ಚುನಾವಣೆಗೆ ಇಂದು ಮತ ಎಣಿಕೆ ನಡೆಯಿತು,ಅದರಲ್ಲಿ ಬಿಜೆಪಿ ಬಹುಮತ ಗಳಿಸಿದೆ.

ಇನ್ನು ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 32 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದಿದೆ.

ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ ಎಸ್‌ಕೆಎಂ ಇತರ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಏಪ್ರಿಲ್ 19 ರಂದು ಲೋಕಸಭೆಯ ಮೊದಲ ಹಂತದ ಚುನಾವಣೆಯ ಸಂದರ್ಭದಲ್ಲೇ ಏಕಕಾಲದಲ್ಲಿ ವಿಧಾನಸಭೆಗೂ ಚುನಾವಣೆಗಳು ನಡೆದಿದ್ದವು.


Share this with Friends

Related Post