Mon. Dec 23rd, 2024

ಆನೇಕಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ ಪಿ ಕೇಶವಮೂರ್ತಿ ನಿಧನ

Share this with Friends

ಆನೇಕಲ್ : ಮಾಜಿ ಸಚಿವ, ಆನೇಕಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ ಪಿ ಕೇಶವಮೂರ್ತಿ (85) ಇಂದು ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಕೇಶವಮೂರ್ತಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆನೇಕಲ್ ವಿಧಾನಸಭಾ ಕ್ಷೇತ್ರದ ಬಗ್ಗೆ ಸಾಕಷ್ಟು ಕಾಳಜಿ ಹೊಂದಿದ್ದ ಕೇಶವಮೂರ್ತಿ ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮೆಚ್ಚುಗೆ ಗಳಿಸಿದ್ದರು. ಎರಡು ಬಾರಿ ಶಾಸಕರಾಗಿದ್ದ ಇವರು ವೀರಪ್ಪ ಮೊಯ್ಲಿ ಸಂಪುಟದಲ್ಲಿ ಅರಣ್ಯ ಮತ್ತು ಸಣ್ಣ ನೀರಾವರಿ ಸಚಿವರಾಗಿ ಕೆಲಸ ಮಾಡಿದ್ದರು.


Share this with Friends

Related Post