Wed. Dec 25th, 2024

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು

Share this with Friends

ಹಾಸನ,ಜೂನ್.4: ತೀವ್ರ ಕೂತುಹಲ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಪ್ರಧಾನಿ, ಎಚ್.ಡಿ. ದೇವೇಗೌಡರ ಮೊಮ್ಮಗ,ಎನ್ ಡಿ‌ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯ ಸೋಲನುಭವಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಸಚಿವ, ದಿವಂಗತ ಜಿ. ಪುಟ್ಟಸ್ವಾಮಿಗೌಡರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್​ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇದರೊಂದಿಗೆ ಹಾಸನದಲ್ಲಿ 25 ವರ್ಷಗಳ ನಂತರ ಕಾಂಗ್ರೆಸ್ ಗೆಲುವು ಸಾಧಿಸಿದಂತಾಗಿದೆ.

ಮತದಾನಕ್ಕೂ ಮೊದಲು ಹಂಚಿಕೆಯಾದ ಪ್ರಜ್ವಲ್‌ ರೇವಣ್ಣರದ್ದು ಎಂದು ಆರೋಪಿಸಲಾದ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು.

ಲೋಕಸಭೆ ಚುನಾವಣೆಯ ನಡುವೆ ಭಾರತ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣ ಫಲಿತಾಂಶದ ಮೇಲೂ ಪರಿಣಾಮ ಬೀರಬಹುದು ಎಂದು‌ ಎಣಿಸಲಾಗಿತ್ತು.

ಹಾಗಾಗಿ ಈ ಕ್ಷೇತ್ರದ ಫಲಿತಾಂಶ‌‌ ಭಾರೀ ಕುತೂಹಲ ಮೂಡಿಸಿತ್ತು,ಈಗ ಎಲ್ಲದಕ್ಕೂ ತೆರೆ ಬಿದ್ದಿದ್ದು ಪ್ರಜ್ವಲ್ ಸೋಲನುಭವಿಸಿದರೆ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ ಗೆಲುವಿನ‌ ನಗೆ‌ ಬೀರಿದ್ದಾರೆ.


Share this with Friends

Related Post