Fri. Jan 10th, 2025

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಡಿದ ಕಿಡಿಗೇಡಿಗಳು

Share this with Friends

ಚಿಕ್ಕಬಳ್ಳಾಪುರ,ಜೂ.5: ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಳೆದ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಡಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ, ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಮನೆಯ ಬೃಹತ್ ಗಾತ್ರದ ಕಿಟಕಿ ಗಾಜು ಪುಡಿಯಾಗಿದೆ.

ಕಳೆದ ರಾತ್ರಿ ಸುಮಾರು 11 ಗಂಟೆ ವೇಳೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆಯ ಹಿಂಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ಘಟನೆ ನಡೆದಿದ್ದು ಪ್ರದೀಪ್ ಈಶ್ವರ್ ಹೇಳಿಕೆಯೇ ಈ ಘಟನೆಗೆ ಕಾರಣ ಎನ್ನಲಾಗಿದ್ದು,
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


Share this with Friends

Related Post