Sat. Nov 2nd, 2024

ಗ್ಯಾರಂಟಿ ಯೋಜನೆ ನಿಲ್ಲಿಸುವುದು ಒಳಿತು: ಎಂ.ಲಕ್ಷ್ಮಣ್

Share this with Friends

ಮೈಸೂರು,ಜೂ.8: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸುವುದು ಒಳಿತು ಎಂದು ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಬಿಜೆಪಿಯವರು ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿದ್ದರು, ಜನ ಅವರನ್ನು ಬೆಂಬಲಿಸಿದ್ದಾರೆ,ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅನ್ನಿಸುತ್ತಿದೆ ಹಾಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಮರು ಪರಿಶೀಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಶೇ 70 ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದು ಹೇಳಿದರು.

ಬೆಂಜ್ ಕಾರ್ ಹೊಂದಿರುವವನು, 25,000 ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ರೀ ಲುಕ್ ಮಾಡುವ ಅಗತ್ಯವಿದೆ ಎಂದು ಲಕ್ಷ್ಮಣ್ ತಿಳಿಸಿದರು.

ಇದಕ್ಕೆ ಉದಾಹರಣೆ ಹುಣಸೂರಿನ ಹಲವು ಹಳ್ಳಿಗಳಲ್ಲಿ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600ಕ್ಕೂ ಹೆಚ್ಚು ಮತ ನೀಡಿದರೆ ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.


Share this with Friends

Related Post