Mon. Dec 23rd, 2024

ನಾಳೆ ಉಚಿತ ಸಾಮೂಹಿಕ ಅಕ್ಷರಾ ಭ್ಯಾಸ, ಸರಸ್ವತಿ ಪೂಜೆ

Share this with Friends

ಮೈಸೂರು,ಫೆ.13: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಸಾಮೂಹಿಕ ಅಕ್ಷರಾ ಭ್ಯಾಸ ಹಾಗೂ ಸರಸ್ವತಿ ಪೂಜೆಯನ್ನು ನಾಳೆ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ವಿಶ್ವೇಶ್ವರ ನಗರದಲ್ಲಿರುವ
ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ನಾಳೆ ಬೆಳಿಗ್ಗೆ 8.30 ಕ್ಕೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.

ಪೂಜ್ಯ ಇಳೈ ಆಳ್ವಾರ್ ಸ್ವಾಮೀಜಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಮಹರ್ಷಿ ಪಬ್ಲಿಕ್ ಶಾಲೆಯ ಮುಖ್ಯಸ್ಥರಾದ ಭವಾನಿ ಶಂಕರ್, ತೇಜಸ್ ಶಂಕರ್, ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾ ನಂದೀಶ್ ಪಾಲ್ಗೊಳ್ಳಲಿದ್ದಾರೆ.


Share this with Friends

Related Post