Sat. Nov 2nd, 2024

ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

Share this with Friends

ಹೈದರಾಬಾದ್‌,ಜೂ.12: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್‌ ಕಲ್ಯಾಣ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈಗಿನದು ಸೇರಿ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದಂತಾಗಿದೆ.

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್‌. ಅಬ್ದುಲ್‌ ನಜೀರ್‌ ಪ್ರಮಾಣವಚನ ಬೋಧಿಸಿದರು.

ಇಂದು ಒಟ್ಟು 23 ಮಂದಿ ಸಚಿವರುಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ನಟ ರಜನಿಕಾಂತ್‌, ಪವನ್‌ ಕಲ್ಯಾಣ್‌ ಸಹೋದರ ಚಿರಂಜೀವಿ ಸೇರಿದಂತೆ ಸಿನಿಮಾ ತಾರೆಯರು, ಎನ್‌ಡಿಎ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಚಂದ್ರಬಾಬು ನಾಯ್ಡು ಅವರು 1995 ರಿಂದ 1999, 2004 ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

2019ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ ಸೋಲು ಕಂಡು ಜಗನ್‌‌ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಅಧಿಕಾರ ಕ್ಕೆ ಬಂದಿತ್ತು.

ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೂ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡಿದ್ದವು.

ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್‌ಆರ್‌ಸಿಪಿ 11 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು.

25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಬಿಜೆಪಿ 3, ಜನಸೇನಾ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಇಂದಿನಿಂದ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ದರ್ಭಾರ್ ಪ್ರಾರಂಭವಾಗಿದೆ.


Share this with Friends

Related Post