Mon. Dec 23rd, 2024

ದರ್ಶನ್ ತಪ್ಪು ಮಾಡಿದ್ದರೆ ಶಿಕ್ಷೆಯಾಗುತ್ತೆ;ಕಾನೂನು ಎಲ್ಲರಿಗೂ ಒಂದೇ: ಪರಮೇಶ್ವರ್

Share this with Friends

ಬೆಂಗಳೂರು,ಜೂ.12: ಹತ್ಯೆಗೀಡಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಪರಮೇಶ್ವರ್ ತಿಳಿಸಿದ್ದಾರೆ

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು, ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಹೇಳಿದರು. ​​​

ದರ್ಶನ್​ ಗೆಳತಿ ಬಗ್ಗೆ ರೇಣುಕಾ ಸ್ವಾಮಿ ಪೋಸ್ಟ್ ಮಾಡಿದ್ದ ಎಂಬ ಆರೋಪವಿದೆ. ಹಾಗೆ ಮಾಡಿದ್ದರೆ ಪೊಲೀಸರಿಗೆ ದೂರು ನೀಡಬಹುದಿತ್ತು, ದೂರು ನೀಡಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದರು ಎಂದು ತಿಳಿಸಿದರು.

ರೇಣುಕಾಸ್ವಾಮಿಯನ್ನು ಕರೆತಂದು ಕೊಲೆ ಮಾಡಲಾಗಿದೆ ಎಂಬ ಆರೋಪ ಇದೆ, ಹೀಗಾಗಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಈ ಕೊಲೆ‌ ಪ್ರಕರಣದ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ,ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಅವರ ತನಿಖಾ ವರದಿ ಕೈಸೇರಿದ ನಂತರ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದರು.


Share this with Friends

Related Post