ಕುವೈತ್, ಜೂ.12: ದಕ್ಷಿಣ ಕುವೈತ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 41 ಭಾರತೀಯರು ಮೃತಪಟ್ಟಿದ್ದಾರೆ.
ಭಾರತೀಯ ಕಾರ್ಮಿಕರು ವಾಸಿಸುವ ಕಟ್ಟಡವೊಂದರಲ್ಲಿ ಇಂದು ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 41 ಭಾರತೀಯರು ಸಾವನ್ನಪ್ಪಿದ್ದು 50 ಮಂದಿ ಗಾಯಗೊಂಡಿದ್ದಾರೆ.
ಮಲಯಾಳಿ ಉದ್ಯಮಿಗೆ ಸೇರಿದ ಕುವೈತ್ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ 160ಕ್ಕೂ ಹೆಚ್ಚು ಕಾರ್ಮಿಕರಿದ್ದರು.
ಆರು ಅಂತಸ್ತಿನ ಕಟ್ಟಡದ ಅಡುಗೆ ಕೋಣೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ತಕ್ಷಣ ಇಡೀ ಕಟ್ಟಡ ಆವರಿಸಿದೆ.ಈ ಅವಘಡದಲ್ಲಿ ಕೆಲವರು ಬೆಂಕಿಯಿಂದ ಮೃತಪಟ್ಟರೆ ಮತ್ತೆ ಕೆಲವರು ದಟ್ಟ ಹೊಗೆಯಿಂದ ಅಸುನೀಗಿದ್ದಾರೆ.
ಕುವೈತ್ ಉಪಪ್ರಧಾನ ಮಂತ್ರಿ ಶೇಖ್ ಫಹಾದ್ ಯೂಸುಫ್ ಸೌದ್ ಅಲ್-ಸಬಾಹ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 40 ಭಾರತೀಯರು ಸಾವನ್ನಪ್ಪಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.