Mon. Dec 23rd, 2024

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ 17ರಂದು ಬಸವಣ್ಣ ಭಾವಚಿತ್ರ‌ ಹಾಕಲು ಸಿಎಂ ಆದೇಶ

Share this with Friends

ಬೆಂಗಳೂರು,ಫೆ.13: ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರವನ್ನು ಫೆ.17 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಕುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿ ದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಗಜ್ಯೋತಿ ಬಸವಣ್ಣರವರ ಭಾವಚಿತ್ರವನ್ನು ಅನಾವರಣ ಮಾಡಿ ಸಿಎಂ ಮಾತನಾಡಿದರು.

ಬಸವಣ್ಣನವರ ಭಾವಚಿತ್ರದಲ್ಲಿ ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ ಎಂದು ನಮೂದಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬುದ್ಧ, ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ್ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತದೆ, ಇವರುಗಳು ನಮ್ಮ ಸಮಾಜದಲ್ಲಿ ಇರುವ ಅಂಕುಡೊಂಕುಗಳನ್ನು ತಿದ್ದಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಿದ್ದಾರೆ ಎಂದು ಸಿಎಂ ಹೇಳಿದರು.

ಈ ವೇಳೆ ಬಸವಣ್ಣನವರ ವಚನಗಳನ್ನು ಸಹ ಸಿದ್ದರಾಮಯ್ಯ ಉಲ್ಲೇಖಿಸಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ, ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.

ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿದ್ದೆನಾ ಎಂದು ಪ್ರಶ್ನಿಸಿದ ಸಿದ್ದು, ನಾನು ಹುಟ್ಟಿದ್ದೇನೆ, ಜಾತಿ ವ್ಯವಸ್ಥೆ ಇದೆ ಕರ್ಮ ಅನ್ನೋದು ಪಟ್ಟಭದ್ರ ಹಿತಾಸಕ್ತಿಗಳು ಮಾಡಿದ್ದು ಎಂದು ಸಿದ್ದರಾಮಯ್ಯ ತಿಳಿಸಿದರು.

ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದಲ್ಲಿ ದುಡ್ಡು ಇಲ್ಲ ಎಂದು ಹೇಳುವುದೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರುಗಳಾದ ಶಿವರಾಜ ತಂಗಡಗಿ, ಈಶ್ವರ ಖಂಡ್ರೆ, ಎಂ. ಬಿ ಪಾಟೀಲ್, ಮಾಂಕಾಳ ವೈದ್ಯ, ಮಧು ಬಂಗಾರಪ್ಪ, ಕೆ.ಎಚ್ ಮುನಿಯಪ್ಪ,ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.


Share this with Friends

Related Post