Sat. Nov 2nd, 2024

ಕಾಮಗಾರಿಗಳಿಗೆ ವೆಚ್ಚ ಮಾಡಲುಕ್ರಿಯಾ ಯೋಜನೆ ಸಿದ್ಧ ಪಡಿಸಿ-ಸಿಎಂ

Share this with Friends

ಬೆಂಗಳೂರು,ಜೂ.14: ಚುನಾವಣಾ ಪ್ರಣಾಳಿಕೆಯಲ್ಲಿ, ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ಒದಗಿಸುವ ಭರವಸೆ ನೀಡಿದ್ದು,ಕಾಮಗಾರಿಗಳಿಗೆ ವೆಚ್ಚ ಮಾಡಲು ಕ್ರಿಯಾ ಯೋಜನೆ ಸಿದ್ದಪಡಿಸಿ ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಕೆ ಕೆ ಆರ್ ಡಿ ಬಿ ಸಭೆಯಲ್ಲಿ ಈ ಆದೇಶ ನೀಡಿದ ಸಿದ್ದರಾಮಯ್ಯ,
ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಹೇಳಿದರು.

ಈಗ ಅನುಮೋದನೆಯಾದ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು,ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು ಎಂದು ತಿಳಿಸಿದರು.

ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು

ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಲಾಯಿತು
ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.


Share this with Friends

Related Post