Mon. Jan 6th, 2025

ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಪ್ರಹ್ಲಾದ ಜೋಶಿ ಆಕ್ರೋಶ

Share this with Friends

ಹುಬ್ಬಳ್ಳಿ,ಜೂ.14: ಲೋಕಸಭೆ ಚುನಾವಣೆ ಸೋಲನ್ನು ಅರಗಿಸಿಕೊಳ್ಳಲಾಗದೆ ಕಾಂಗ್ರೆಸ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ‌ ವಿರುದ್ಧ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು 81 ವರ್ಷದ ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥೆ, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ,ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಆರೋಪಿಸಿದ್ದಾರೆ.


Share this with Friends

Related Post