Sat. Jan 4th, 2025

ಹಣ ಪಣವಿಟ್ಟು ಕೇರಂ ಆಟ:49 ಮಂದಿ ಬಂಧನ

Share this with Friends

ಮೈಸೂರು, ಜೂ.14: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ,ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟು ಕೇರಂ ಆಟದಲ್ಲಿ ತೊಡಗಿದ್ದ 49 ಮಂದಿಯನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಕೆಲವರು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೇರಂ ಆಟವನ್ನು ಜೂಜಾಟದಂತೆ ಆಡುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತ್ಯೇಕ ತಂಡಗಳಾಗಿ ಕೇರಂ ಅಡ್ಡೆಗಳ ಮೇಲೆ ದಾಳಿ ನಡೆಸಿದರು.

ಈ‌ ವೇಳೆ ಒಟ್ಟು 49 ಮಂದಿಯನ್ನು ವಶಕ್ಕೆ ಪಡೆದು ಅವರಿಂದ 64,007 ರೂ ಮತ್ತು 15 ಕೇರಂ ಬೋರ್ಡ್‍ಗಳು ಹಾಗೂ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.

ಈ ದಾಳಿ ಕಾರ್ಯವನ್ನು ಮೈಸೂರು ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಪ್ರಶಂಸಿಸಿದ್ದಾರೆ.


Share this with Friends

Related Post