Mon. Apr 21st, 2025

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ಮುಂದುವರಿಕೆ ಸಾಧ್ಯವಿಲ್ಲ:ಎಂ.ಬಿ.ಪಾ

Share this with Friends

ಹುಬ್ಬಳ್ಳಿ,ಜೂ.15: ರೇಣುಕಾಸ್ವಾಮಿ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ದರ್ಶನ್‍ಗೆ ರಾಜಮರ್ಯಾದೆ ಕೊಡುವ ಪ್ರಶ್ನೆಯೇ ಇಲ್ಲ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ, ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಎಂ.ಬಿ.ಪಾಟೀಲ್‌ ಹೇಳಿದರು.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ, ಪೋಕ್ಸೋ ಕಾಯ್ದೆ ಅತ್ಯಂತ ಗಂಭೀರವಾದದ್ದು, ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ತಪ್ಪಿತಸ್ಥರು ಹೌದೋ, ಅಲ್ಲವೋ ಎಂಬುದನ್ನು ನ್ಯಾಯಾಲಯ ನಿರ್ಧರಿಸುತ್ತದೆ. ಸಂತ್ರಸ್ತೆಯೇ ನ್ಯಾಯಾಧೀಶರ ಎದುರು ಹೇಳಿಕೆ ಕೊಟ್ಟಿದ್ದಾರಲ್ಲಾ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.


Share this with Friends

Related Post