ಬೆಂಗಳೂರು, ಫೆ.13: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶ ಕಾರ್ಯಕರ್ತರ ಸಂಘ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೇ ವಂಚನೆ ಯಾಗುತ್ತಿದ್ದು ಅದನ್ನು ತಡೆಗಟ್ಟಬೇಕು,
ಕೇಂದ್ರ, ರಾಜ್ಯ ಸರ್ಕಾರದಿಂದ 15000 ರೂ ನೀಡಬೇಕು ಎಂದು ಆಶಾ ಕಾರ್ಯಕರ್ತೆಯರು ಒತ್ತಾಯಿಸಿದರು.
ಕಳೆದ ಎಂಟು ವರ್ಷದಿಂದ ಆಶಾ ಕಾರ್ಯಕರ್ತೆಯರಿಗೆ ಕೇಂದ್ರದ ಪ್ರೋತ್ಸಾಹಧನ ನೀಡಲು ಆನ್ಲೈನ್ ಪೋರ್ಟಲ್ಲಿ ಡಿಲಿಂಕ್ ಮಾಡಿದ್ದು ಆಗಿನಿಂದ ನಾವು ಕಷ್ಟಪಟ್ಟು ದುಡಿದ್ದಕ್ಕೆ ಪ್ರತಿಫಲ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡರು.
ಹಲವು ವರ್ಷಗಳಿಂದ ಬಾಕಿ
ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಕನಿಷ್ಠ 15000 ವೇತನ ನೀಡಬೇಕು ಎಂದು ಆಶಾ ಕಾರ್ಯಕರ್ತೆ ಒತ್ತಾಯಿಸಿದರು.
ಆಶಾ ಕಾರ್ಯಕರ್ತೆರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದರು, ಆದರೆ ಫ್ರೀಡಂ ಪಾರ್ಕ್ ನಿಂದ ಮೆರವಣಿಗೆ ಹೊರಟ ಅವರನ್ನು ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತಡೆದರು.
ಪಿಂಕ್ ಬಣ್ಣದ ಸೀರೆಯುಟ್ಟಿದ್ದರಿಂದ ಇಡೀ ರಸ್ತೆ ಮತ್ತು ಫ್ರೀಡಂ ಪಾರ್ಕ್ ಪಿಂಕ್ ಮಾಯವಾಗಿ ಕಾಣುತ್ತಿತ್ತು.