Sat. Jan 4th, 2025

70 ಬಾರಿ ಸ್ವಯಂ ಪ್ರೇರಿತ ರಕ್ತದಾನ: ಆನಂದ್ ಗೆ ಜೀವ ರಕ್ಷಕ ಪ್ರಶಸ್ತಿ

Share this with Friends

ಮೈಸೂರು,ಜೂ.15: 70 ಬಾರಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ಬಿಜೆಪಿ ಮುಖಂಡ ಆನಂದ್ ಅವರಿಗೆ
ಜೀವ ರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ
ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಆಯೋಜಿಸಿದ ವಿಶ್ವ ರಕ್ತದಾನಿಗಳ ದಿನಾಚರಣೆ ವೇಳೆ ಡಾ.ರಾಜಕುಮಾರ್ ರಸ್ತೆಯ ನಿವಾಸಿ ಆನಂದ್ ಅವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ಪಿ. ಸಿ ಕುಮಾರಸ್ವಾಮಿ ಅವರು ಆನಂದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಎನ್ ಕೆ ಲೋಕನಾಥ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಅಧಿಕಾರಿ ಡಾ. ಮಹಮ್ಮದ್ ಸಿರಾಜ್ ಅಹಮದ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮತ್ತಿತರರು ಆನಂದ್ ಅವರಿಗೆ ಶುಭ ಹಾರೈಸಿದರು.


Share this with Friends

Related Post