ಮೈಸೂರು, ಜೂ.16: ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ರಾಜ್ಯದ ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕಳೆದ ಒಂದು ವರ್ಷಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿ ಈಗ ಎಲ್ಲಾ ಬಿಟ್ಟಿ ಭಾಗ್ಯಗಳನ್ನು ಲೋಕಸಭಾ ಚುನಾವಣೆಯ ನಂತರ ನಿಲ್ಲಿಸುವ ಆಲೋಚನೆಯಲ್ಲಿತ್ತು.
ಆದರೆ ಈಗ ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್, ಗ್ರಾಮ ಪಂಚಾಯತ್ ಚುನಾವಣೆ ನಡೆಯುವುದರಿಂದ ಬಿಟ್ಟಿ ಭಾಗ್ಯಗಳನ್ನು ಇನ್ನೂ ಜೀವಂತವಾಗಿಟ್ಟುಕೊಳ್ಳಲು ರಾಜ್ಯದ ಜನರಿಗೆ ಅತೀ ಅಗತ್ಯವಾಗಿರುವ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಈ ವೇಳೆ ಹಲವು ಮುಖಂಡರು ಟೀಕಿಸಿದರು.
ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿಯಂತ್ರಣ ಮಾಡಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು.
ಪ್ರಭುಶಂಕರ್ ಎಂ ಬಿ, ಕೃಷ್ಣಯ್ಯ, ಸುರೇಶ್ ಗೋಲ್ಡ್, ಡಾ. ಶಾಂತ ರಾಜೇ ಅರಸ್, ಶಿವಲಿಂಗಯ್ಯ, ನೇಹ ,ನಾರಾಯಣ ಗೌಡ, ಲಕ್ಷ್ಮಿ, ಭಾಗ್ಯಮ್ಮ , ಸುನಿಲ್ ಅಗರ್ವಾಲ್, ಪರಿಸರ ಚಂದ್ರು, ದರ್ಶನ್ ಗೌಡ, ಹನುಮಂತಯ್ಯ, ರಾಧಾಕೃಷ್ಣ, ರಘುರಾಜ್ ಅರಸು ,ಆನಂದ್, ಸ್ವಾಮಿ ಗೌಡ, ಗಣೇಶ ಪ್ರಸಾದ್, ರಾಮಕೃಷ್ಣ ಗೌಡ, ರವೀಶ್, ಪ್ರಭಾಕರ, ಮಹಾದೇವ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.