ಪಿರಿಯಾಪಟ್ಟಣ,ಜೂ.17: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿ ತಾಯಿಯ ಸಮಾಧಿ ಬಳಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಈ ಘಟನೆ ಪಿರಿಯಾಪಟ್ಟಣ ತಾಲೂಕು ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದ್ದು,ಶಿವರಾಜ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಶಿವರಾಜ್ ಕುಡಿತದ ಚಟಕ್ಕೆ ದಾಸನಾಗಿದ್ದ.ಇದೇ ವಿಚಾರಕ್ಕೆ ಮನೆಯಲ್ಲಿ ಜಗಳ ನಡೆಯುತ್ತಿತ್ತು.ಇದರಿಂದ ಬೇಸತ್ತ ಶಿವರಾಜ್ ತನ್ನ ತಾಯಿಯನ್ನ ಹೂತುಹಾಕಿದ್ದ ಸ್ಥಳಕ್ಕೆ ತೆರಳಿ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಭಂಧ ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.