Sat. Nov 2nd, 2024

ರಾಜ್ಯದ ಜನರ ಹಣವನ್ನು ಕೇಂದ್ರ ಕೊಟ್ಟಿದ್ದರೆ ತೆರಿಗೆ ಹೆಚ್ವಿಸುವ ಅಗತ್ಯವೇ ಬರುತ್ತಿರಲಿಲ್ಲ:ಸಿಎಂ

Share this with Friends

ಬೆಂಗಳೂರು, ಜೂ.17: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂಧನ ಬೆಲೆ ಏರಿಕೆಯಾದರೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಮತ್ತು ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಬೆಲೆ ಕಡಿಮೆ ಇದೆ ಎಂದು ಸಿದ್ದರಾಮಯ್ಯ ಅಂಕಿ ಅಂಶಗಳ ಸಹಿತ ವಿವರಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಈ ಪರಿಸ್ಥಿತಿ ಆಗಿದೆ ಎಂದು ಹೇಳಿದರು.

2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಯಿತು ಎಂದು ಅಂಕಿ ಅಂಶಗಳನ್ನು ಸಿಎಂ ನೀಡಿದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದು ಸಿಎಂ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಸಿಎಂ ಕಾರವಾಗಿ ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ.

ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ,ಅವರಿಗೆ ಇದೆಲ್ಲಾ ಅರ್ಥ ಆಗುವುದಿಲ್ಲ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದರು.


Share this with Friends

Related Post