Sat. Nov 2nd, 2024

ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

Share this with Friends

ಬೆಂಗಳೂರು,ಜೂ.18: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ದುಬಾರಿ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ಜೆಡಿಎಸ್ ಪ್ರತಿಭಟನೆ ನಡೆಸಿತು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಸೈಕಲ್ ಹಾಗೂ ಟಾಂಗಾ ಗಾಡಿಗಳ ಮೂಲಕ ವಿನೂತನವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ, ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜನರ ಮೇಲೆ ಹೇರುತ್ತಿದೆ ಎಂದು ದೂರಿದರು.

ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕೆ ಜನರ ಕಿಸೆಗೆ ಕೈ ಹಾಕಿದೆ ಸರ್ಕಾರ. ಜನರಿಗೆ ಅಗ್ಗದ ಆಮಿಷಗಳನ್ನು ಒಡ್ಡಿ ಜನರಿಂದಲೇ ದೊಡ್ಡ ಪ್ರಮಾಣದಲ್ಲಿ ಹಣ ಸುಲಿಗೆ ಮಾಡುತ್ತಿದೆ. ಪೆಟ್ರೋಲ್-ಡಿಸೇಲ್‌ ಬೆಲೆ ಏರಿಕೆಯಿಂದ ಈಗ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಆಗಿದೆ. ಬಡವರು, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ ಎಂದು ಕಿಡಿಕಾರಿದರು

ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ ಸೇರಿದಂತೆ ಅನೇಕ ನಾಯಕರು ಟಾಂಗಾ ಗಾಡಿ ಏರಿ ಸೈಕಲ್ ತುಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ಮಹಾನಗರ ಕಾರ್ಯಾಧ್ಯಕ್ಷ ಜೆ.ಟಿ.ರೇವಣ್ಣ, ಬೆಂಗಳೂರು ಮಹಾನಗರದ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್ ಸೇರಿದಂತೆ ಪಕ್ಷದ ಎಲ್ಲಾ ಕ್ಷೇತ್ರದ ಅಧ್ಯಕ್ಷರು, ಕಾರ್ಯಕರ್ತರು ಪಾಲ್ಗೊಂಡಿದ್ದರು.


Share this with Friends

Related Post