ಮೈಸೂರು,ಜೂ.18 : ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಬಡ ಜನರು ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅನುಕೂಲವಾಗಿವೆ ಎಂದು ಶಾಸಕ ಟಿ ಎಸ್ ಶ್ರೀವತ್ಸ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ತ್ರಿವೇಣಿ ಗೆಳೆಯರ ಬಳಗದ 30ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಇದೇ ತಿಂಗಳು 22ರಂದು ತ್ರಿವೇಣಿ ವೃತ್ತದ ಕೆ ಎಸ್ ಇ ಬಿ ಕಾಲೋನಿಯಲ್ಲಿ ಸ್ಪರ್ಶ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆ, ದಂತ ತಪಾಸಣೆ, ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಅದರ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.
ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು
ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ತ್ರಿವೇಣಿ ಗೆಳೆಯರ ಬಳಗದ ಅಧ್ಯಕ್ಷ ಬಿ ಆನಂದ್ ಮಾತನಾಡಿ,
ಈ ಆರೋಗ್ಯ ತಪಾಸಣೆ ಶಿಬಿರವನ್ನು ಸಾರ್ವಜನಿಕರು ಸದುಪಯೋಗ
ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಉಚಿತ ಆರೋಗ್ಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ದಂತ ತಪಾಸಣೆ, ಸಕ್ಕರೆ ಕಾಯಿಲೆ ಮತ್ತು ಬಿಪಿ ಪರೀಕ್ಷೆಯನ್ನು ನುರಿತ ತಜ್ಞರಿಂದ ನಡೆಸಲಾಗುವುದು ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಸ್ವಯಂ ಪ್ರೇರಿತ ರಕ್ತದಾನ ಮಾಡಲು ಇಚ್ಚಿಸುವವರು
9901259093/9900809019 ನಂಬರಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಿ
ಕೊಳ್ಳಬಹುದು ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಜಯರಾಮ್, ಪ್ರದೀಪ್ ಕುಮಾರ್, ಕಿಶೋರ್, ಕೀರ್ತಿ, ಸಚಿನ್ ನಾಯಕ್ ಮತ್ತಿತರರು ಹಾಜರಿದ್ದರು.