Sat. Nov 2nd, 2024

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಹೆಚ್ ಡಿಕೆ

Share this with Friends

ನವದೆಹಲಿ,ಜೂ.19: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ಮಾಡಿದ್ದಾರೆ.

ಈ ವೇಳೆ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಅವರು ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ,ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಅಶ್ವಿನಿ ವೈಷ್ಣವ್ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು ಎಂದ ಹೇಳಿದರು.

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು,ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದೆವು ಎಂದು ತಿಳಿಸಿದರು.

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಕೋರಿದ್ದೇನೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಹೆಚ್ ಡಿ ಕೆ ಮಾಹಿತಿ ನೀಡಿದರು.


Share this with Friends

Related Post